ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ಸಿಗಂದೂರು ಸೇತುವೆಗಾಗಿ ಬಿಎಸ್ ಯಡಿಯೂರಪ್ಪನವರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬರೆದಿರುವ ಪತ್ರ ವೈರಲ್

On: July 13, 2025 12:34 PM
Follow Us:
---Advertisement---

ಸಾಗರ : ನಾಡಿನ ಜನರು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಅಂಬಾರಗೋಡ್ಲು  ಕಳಸವಳ್ಳಿ ಸೇತುವೆ ಜುಲೈ 14 ರಂದು ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಂದ ಲೋಕಾರ್ಪಣೆಯಾಗುತ್ತಿದೆ.

ನೂತನ ಸೇತುವೆ ಉದ್ಘಾಟನೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಗುದ್ದಾಟಕ್ಕೂ ಕಾರಣವಾಗಿದೆ. ಇವೆಲ್ಲರ ನಡುವೆ ಈಗ ಶಾಸಕ ಗೋಪಾಲಕೃಷ್ಣ ಬೇಳೂರು ಬಿಎಸ್ ಯಡಿಯೂರಪ್ಪನವರಿಗೆ ಬರೆದಿರುವ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.beluru MLA

ಶಾಸಕ ಗೋಪಾಲಕೃಷ್ಣ ಬೇಳೂರು ಬಿಎಸ್ ಯಡಿಯೂರಪ್ಪನವರಿಗೆ ಬರೆಯುವ ಪತ್ರದ ವಿಶೇಷತೆಗಳೇನು?

 ಲಿಂಗನಮಕ್ಕಿ ಆಣೆಕಟ್ಟ ನಿರ್ಮಾಣದಿಂದಾಗಿ ಶರವತಿ ನದಿ ಹಿನ್ನಿರ ಪರಿಣಾಮ ಸಾಗರ ತಾಲ್ಲೂಕಿನ ತುಮರಿ, ಕುದರೂರು, ಶಂಕಣ್ಣ ಶ್ಯಾನುಭೋಗ್, ಚೆನ್ನಗೊಂಡ ಹಾಗೂ ಬಾನಕೋಳಿ ಹೀಗೆ ಒಟ್ಟು ಐದು ಗ್ರಾಮ ಪಂಚಾಯಿತಿಗಳ ಸುಮಾರು 20 ಸಾವಿರ ಜನರು ತಾಲೂಕು ಕೇಂದ್ರದಿಂದ ಸಂಪರ್ಕ ಕಳೆದುಕೊಂಡು ಅನೇಕ ಸಮಸ್ಯೆಗಳನ್ನು ಅನುಭವಿಸುತ್ತಿರುವುದು ತಮಗೆ ತಿಳಿದ ವಿಷಯವಾಗಿದೆ. ಇದೇ ಭಾಗದಲ್ಲಿ ಬರುವ ಶ್ರೀ ಸಿಗಂದೂರು ಕ್ಷೇತ್ರ ಹಾಗೂ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಲಕ್ಷಾಂತರ ಜನರು ಭೇಟಿ ನೀಡುತ್ತಾ ಇರುತ್ತಾರೆ.

ಈ ಹಿನ್ನೆಲೆಯಲ್ಲಿ ಈ ಭಾಗದ ಜನರ ಸಮಸ್ಯೆಗಳನ್ನು ಅರಿತಿರುವ ತಾವುಗಳು ಸದರಿ ಅಂಬಾರಗೋಡ್ಲು ಕಳಸವಳ್ಳಿ ಸೇತುವೆ ನಿರ್ಮಾಣಕ್ಕಾಗಿ ಈ ಸಾಲಿನ ಕರ್ನಾಟಕ ಸರ್ಕಾರದ ಬಜೆಟ್ ನಲ್ಲಿ 100 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಲು ತಮ್ಮಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಎಂದು ಪತ್ರದಲ್ಲಿ ಮನವಿ ಮಾಡಿದ್ದರು.letter

ಬೇಳೂರು ಪತ್ರಕ್ಕೆ ಪ್ರತಿಕ್ರಿಯೆ ನೀಡಿದ ಅಂದಿನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ

ಅಂಬಾರಗೋಡ್ಲು ಕಳಸವಳ್ಳಿ ಸೇತುವೆ ನಿರ್ಮಾಣಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಪತ್ರಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಈ ವರ್ಷದ ಕಾಮಗಾರಿಯಲ್ಲಿ ಇದೊಂದು ವಿಶೇಷ ಪ್ರಕರಣ ಎಂದು ಪರಿಗಣಿಸಿ ಮಂಜುನಾಥ ಕಾಮಗಾರಿ ಕೈಗೊಳ್ಳುವುದಾಗಿ ಪತ್ರದಲ್ಲಿ ತಿಳಿಸಿದ್ದರು.

 

Join WhatsApp

Join Now

Join Telegram

Join Now

ಪ್ರಮುಖ ಸುದ್ದಿ

ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ಕಾರ್ಯಕರ್ತರ ಒಕ್ಕೊರಲಿನಿಂದ ಒತ್ತಾಯ. A group of Congress workers demand that MLA Gopalakrishna Belur be given a ministerial berth.

ಬಂಗಾರದ ಆಸೆಗೆ ಬಿದ್ದು 10 ಲಕ್ಷ ಕಳೆದುಕೊಂಡ ಮೈಸೂರು ಮೂಲದ ವ್ಯಕ್ತಿ. A man from Mysore who lost rs 10 lakh in the desire for gold.

Heavy Rain : ಮಳೆಹಾನಿ ಪ್ರದೇಶಗಳಿಗೆ ಶಾಸಕರ ಆಪ್ತ ಸಹಾಯಕ ಹಾಗೂ ಮುಖಂಡರ ಭೇಟಿ, ಪರಿಶೀಲನೆ. MLA’s personal assistant and leaders visit rain – damaged areas.

ಪ್ರಕೃತಿಯ ನಡುವೆ ನೆಮ್ಮದಿಯ ಬದುಕು : ಆಗಮನ ಡೆವಲಪರ್ಸ್ ವತಿಯಿಂದ ಅಭಿವೃದ್ಧಿಯಾಗುತ್ತಿರುವ ತಪೋವನ ಫಾರ್ಮ್‌ಲ್ಯಾಂಡ್. A peaceful life amidst nature: Tapovana farmland is being developed by Agamana Developers

IPL : RCB vs GT ನಡುವೆ ಫೈನಲ್ : ಯಾರಿಗೆ ಒಲಿಯಲಿದೆ ವಿಜಯಲಕ್ಷ್ಮಿ.

ಶಾಸಕರಿಂದ ರೈತರಿಗೆ ರಕ್ಷಣೆ ಇಲ್ಲ – ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಮುಖಂಡ ರತ್ನಾಕರ್ ಹೊನಗೋಡು

Leave a Comment