ಸಾಗರ : ಜನರ ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂದೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಕಳಸವಳ್ಳಿ ಅಂಬಾರಗೊಡ್ಲು ಸೇತುವೆ ಜುಲೈ 14ರಂದು ಉದ್ಘಾಟನೆಯಾಗಲಿ ಎಂದು ಸಂಸದ ಬಿ. ವೈ ರಾಘವೇಂದ್ರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಈ ನೂತನ ಐತಿಹಾಸಿಕ ಸೇತುವೆಯನ್ನು ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರ್ ಅವರು ಉದ್ಘಾಟನೆ ಮಾಡಲಿದ್ದಾರೆ. ಜೊತೆಗೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ನೂತನ ಸೇತುವೆಗೆ ಸಿಗಂದೂರು ಚೌಡೇಶ್ವರಿ ಸೇತುವೆ ಎಂದು ನಾಮಕರಣ
ಈ ನೂತನ ಐತಿಹಾಸಿಕ ಸೇತುವೆಗೆ ಸಿಗಂದೂರು ಚೌಡೇಶ್ವರಿ ಸೇತುವೆ ಎಂದು ನಾಮಕರಣ ಮಾಡಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ಸೇತುವೆ ಗುಣಮಟ್ಟ ಪರಿಶೀಲನೆ ಮಾಡಲು ಎರಡನೇ ಹಂತದ ಸಾಮರ್ಥ್ಯ ಪರೀಕ್ಷೆ ನಡೆಯಲಿದೆ. ಇನ್ನು ಸಣ್ಣಪುಟ್ಟ ಕಾಮಗಾರಿಗಳಿದ್ದು ಶೀಘ್ರವೇ ಪೂರ್ಣಗೊಳ್ಳಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಸಕರಾದ ಆರಗ ಜ್ಞಾನೇಂದ್ರ, ಚೆನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಧನಂಜಯ ಸರ್ಜಿ, ರಾಜ್ಜ ಬಿಜೆಪಿ ಉಪಾಧ್ಯಕ್ಷರಾದ ಎಚ್ ಹಾಲಪ್ಪ, ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಜಗದೀಶ್ ರಾಜ್ಯ ಪ್ರಕೋಷ್ಟ ಸಂಯೋಜಕರಾದ ದತ್ತಾತ್ರಿ, ಮಾಜಿ ಶಾಸಕರಾದ ಕೆ ಜಿ ಕುಮಾರಸ್ವಾಮಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಹರಿಕೃಷ್ಣ ಹಾಗೂ ಮಾಲತೇಶ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.