ಸಾಗರ : ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಸಂದರ್ಭದಲ್ಲಿ ಹೃದಯಘಾತವಾಗಿ ಯುವಕನೊಬ್ಬ ಸಾವನಪ್ಪಿದ್ದಾನೆ.
ದಾವಣಗೆರೆಯಿಂದ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ತನ್ನ ಸ್ನೇಹಿತನ ಜೊತೆ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಸಂದರ್ಭದಲ್ಲಿ ಬಳಸಗೋಡು ಗ್ರಾಮದ ಸಮೀಪ ಹೃದಯಾಘಾತವಾಗಿ ಮೃತಪಟ್ಟ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.
ದಾವಣಗೆರೆಯ ಬಸಾಪುರ ಗ್ರಾಮದ ವಾಸಿ ಕೆಂಪನಹಳ್ಳಿ ರವೀಂದ್ರವರ ಹಿರಿಯ ಪುತ್ರ ಕೆ. ಆಕರ್ಷ್(29) ಮೃತಪಟ್ಟ ಯುವಕ. ದಾವಣಗೆರೆ ಲೋಕಸಭಾ ಕ್ಷೇತ್ರದ ಸಂಸದೆ ಪ್ರಭಾ ಮಲ್ಲಿಕಾರ್ಜುನ ಅವರ ಆಪ್ತ ಸಹಾಯಕ ಹರೀಶ್ ಬಸಾಪುರ ರವರ ಸಹೋದರ ಪುತ್ರನೇ ಆಕರ್ಷ್.
ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.